ಮಂಗಳೂರು, ಡಿ 04 (DaijiworldNews/SM): 2023ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಡ್ದಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆದೇಶಾ ಹೊರಡಿಸಿದ್ದಾರೆ.
ಈ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ – ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಹೊಸ ವರ್ಷಾಚರಣೆಯ ಕೂಟ ನಡೆಸುವ ನಗರದ ಎಲ್ಲ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು (ಒಳಾವರಣದಲ್ಲಿ ಮಾತ್ರ) ಅರ್ಜಿ ಸಲ್ಲಿಸಬೇಕು.
ಡಿ. 31ರ ರಾತ್ರಿ ಆರಂಭವಾಗುವ ಹೊಸ ವರ್ಷಾ ಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿ. 15ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ನೂತನ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಕಾರ್ಯಕ್ರಮದ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ನಿಲ್ಲಿಸುವಂತೆ ಸೂಚಿಸಲಾಗಿದೆ.