ಮಂಗಳೂರು, ಡಿ 7 (DaijiworldNews/HR): ಡಿ. 3ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ.ಕ ಜಿಲ್ಲಾ ವಕೀಲರ ಸಂಘದಿಂದ ಇಂದು ಮಂಗಳೂರು ಕೋರ್ಟ್ ಎದುರು ಪ್ರತಿಭಟನೆ ನಡೆಯಿತು.
ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲಕುಲದೀಪ್ ಶೆಟ್ಟಿ ಮೇಲೆ ಎಫ್ ಐ ಆರ್ ದಾಖಲಿಸಿ ರಾತೋರಾತ್ರಿ ವಕೀಲರ ಮನೆ ಪ್ರವೇಶ ಮಾಡಿ ವಕೀಲರನ್ನು ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ನೂರಾರು ವಕೀಲರಿಂದ ಕೋರ್ಟ್ ಮುಂಭಾಗ ಪ್ರತಿಭಟನೆ ನಡೇಸಿದ್ದಾರೆ.
ಇನ್ನು ಅರೆಬೆತ್ತಲಾಗಿ ನ್ಯಾಯವಾದಿಯನ್ನ ಜೀಪಿನಲ್ಲಿ ಎಳೆದುಕೊಂಡು ಹೋಗಿದ್ದು, ಪುಂಜಾಲಕಟ್ಟೆ ಪಿಎಸ್ಸೈ ವಿರುದ್ದ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಪಿಎಸ್ಸೈ ಅಮಾನತಿಗೆ ಆಗ್ರಹಿಸಿದ್ದಾರೆ.