ಮಂಗಳೂರು,ಮಾ 01 (MSP): ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪರೀಕ್ಷಾಯ ಮೊದಲ ದಿನವಾದ ಇಂದು ಅರ್ಥಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಮಂಗಳೂರಿನಲ್ಲಿ ಪರೀಕ್ಷಾ ಬರೆಯಲು ಸಿದ್ದತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು- ವಿದ್ಯಾರ್ಥಿನಿಯರು
ಉಡುಪಿಯಲ್ಲಿ ಪರೀಕ್ಷಾ ಬರೆಯಲು ಸಿದ್ದತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು- ವಿದ್ಯಾರ್ಥಿನಿಯರು
ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಆಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದ್ದು, ಸಿ.ಸಿ ಟಿ.ವಿ ಕಣ್ಗಾವಲು, ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಪ್ರಾರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 54 ಪರೀಕ್ಷಾ ಕೇಂದ್ರಗಳಿದ್ದು, ಇದರಲ್ಲಿ ಮಂಗಳೂರು- 25, ಮೂಡುಬಿದಿರೆ- 5, ಬಂಟ್ವಾಳ- 7, ಪುತ್ತೂರು- 9, ಬೆಳ್ತಂಗಡಿ- 5 ಹಾಗೂ ಸುಳ್ಯ- 3 ಗಳಲ್ಲಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಬೇರೆ ಜಿಲ್ಲೆಯ 54 ಮಂದಿ ಸ್ಕ್ವಾಡ್ ಗಳನ್ನು ನೇಮಿಸಲಾಗಿದೆ. ಇದಲ್ಲದೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಕಾಲೇಜಿನ ಪ್ರಾಶಂಪಾಲರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದೆ. ಇದರೊಂದಿಗೆ ಪರೀಕ್ಷ್ ಆಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ಮಾಡಲು ಜಾಗೃತ ದಳಗಳನ್ನು ರಚಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ರೆಗ್ಯುಲರ್, ಪುನರಾವರ್ತಿತ ಹಾಗೂ ಖಾಸಗಿ ಒಳಗೊಂಡು ಒಟ್ಟು 38,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 16,977 ಗಂಡು ಮಕ್ಕಳು ಮತ್ತು 17,787 ಹೆಣ್ಣು ಮಕ್ಕಳು ಸಹಿತ 34,764 ರೆಗ್ಯುಲರ್ ವಿದ್ಯಾರ್ಥಿಗಳು, 1028 ಪುನರಾವರ್ತಿತ ಹಾಗೂ 2,400 ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯಲಿದ್ದಾರೆ.
ಕಲಾ ವಿಭಾಗದಲ್ಲಿ ಒಟ್ಟು 3,933 (ಗಂಡು 1557-ಹೆಣ್ಣು 2376) ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 14478 (ಗಂಡು 6707- ಹೆಣ್ಣು 7771) ಹಾಗೂ ವಿಜ್ಞಾನ ವಿಭಾಗದಲ್ಲಿ 16,353 (ಗಂಡು 8713- ಹೆಣ್ಣು- 7640) ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.