ಪಡುಬಿದ್ರಿ, ಡಿ. 10 (DaijiworldNews/SM): ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು, ಶನಿವಾರ ಸಂಜೆ ೪ ಗಂಟೆಗೆ ಕಾಪು ಪೊಲೀಸರಿಂದ ವಾಹನ ಸವಾರರನ್ನು ಜಾಗೃರನ್ನಾಗಿ ಮಾಡುವ ಸಂದೇಶ ಸಾರಲಾಯಿತು.
ಅಪಘಾತ ಸಂಭವಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಲಾಯಿತು.
ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆಯ ಮೇರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾಪು ವೃತ್ತ ನಿರೀಕ್ಷಕರಾದ ಕೆಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ,ಕಟಪಾಡಿ ಉಪ ಠಾಣಾ ಸಿಬ್ಬಂದಿ ರುಕ್ಮಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.