ಉಡುಪಿ, ಡಿ 12 (DaijiworldNews/SM): ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ - 1690 ಇದರ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆ ೩ಆ ಪೂರ್ಣಗೊಂಡಿದ್ದು, ತ್ವರಿತವಾಗಿ ಕಾಮಗಾರಿ ಆರಂಭಿಸುವ ಕುರಿತು ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ತೀರ್ಥಹಳ್ಳಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ - 1690 ಇದರ ಹೆಬ್ರಿ - ಪರ್ಕಳ - ಕರಾವಳಿ ಜಂಕ್ಷನ್ - ಮಲ್ಪೆ ವರೆಗಿನ ರಸ್ತೆ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ಪರ್ಕಳದಿಂದ ಕಾಮಗಾರಿ ಆರಂಭಗೊಂಡಿರುತ್ತದೆ. ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆ ಚತುಷ್ಪಥ ಕಾಮಗಾರಿ ಕೈಗೊಳ್ಳಲು ಭೂ ಸ್ವಾಧೀನ ಪಡಿಸಿ ನಡೆಸಿ ಸೂಕ್ತ ಪರಿಹಾರ ಕಲ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಪಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳಿಸಿ, ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವುದು ಹಾಗೂ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದ ಶಾಸಕ ರಘುಪತಿ ಭಟ್ ಅವರು ಸೇತುವೆ ಕಾಮಗಾರಿ ತಕ್ಷಣದಲ್ಲಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್ ನಾಯಕ್, ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್, ಮೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ರಾಕೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಉದಯ್ ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕ್ಲಿಫರ್ಡ್ ಲೋಬೋ ಉಡುಪಿ ತಹಶೀಲ್ದಾರರಾದ ಮಹೇಶ್, ಕಂದಾಯ ನಿರೀಕ್ಷಕರಾದ ಉಪೇಂದ್ರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.