ಕಾರ್ಕಳ, ಡಿ 14 ( DaijiworldNews/MS): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಬಿಜೆಪಿ ಶಾಸಕ, ಇಂಧನ ಸಚಿವರಾಗಿರಾಗಿರುವ ಸುನಿಲ್ ಕುಮಾರ್ಗೆ "ಗುರು"ವಿಗಾಗಿ ಕ್ಷೇತ್ರ ತ್ಯಾಗ ಮಾಡಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಾರ್ಕಳದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, " ನಾನು ಕಾರ್ಕಳದಿಂದ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದಾಗಿನಿಂದ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ.ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ" ಎಂದು ಸವಾಲು ಹಾಕಿದ್ದಾರೆ.
ಹಿಂದುತ್ವಕ್ಕಾಗಿ ನಾನು ಸಾಕಷ್ಟು ಆರೋಪಗಳನ್ನು ಎದುರಿಸಿದ್ದೇನೆ, ಸಂಕಷ್ಟ ಅನುಭವಿಸಿದ್ದೇನೆ. ಮುಖಕ್ಕೆ ಮಸಿ ಬಳಿಸಿಕೊಂಡಿದ್ದೇನೆ, ಅದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ. ಸಂಘವು ನನಗೆ ರಾಷ್ಟ್ರಪ್ರೇಮ, ಹಿಂದುತ್ವದ ರಕ್ಷಣೆಯ ಪಾಠವನ್ನು ಕಲಿಸಿದೆ ʻಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ. ನನಗೆ ಹಣ, ಆಸ್ತಿ ಮಾಡುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ನಿಮ್ಮಲ್ಲಿ ನಿಜವಾಗಿ ಹಿಂದುತ್ವ , ಆರ್ಎಸ್ಎಸ್ ಇದ್ದರೆ ಕ್ಷೇತ್ರ ತ್ಯಾಗ ಮಾಡಿ. ಕ್ಷೇತ್ರ ನನಗೆ ಬಿಟ್ಟು ಕೊಡಿ. ನಾನು ಹಿಂದುತ್ವ ಏನೆಂದು ತೋರಿಸುತ್ತೇನೆ. ಐದು ವರ್ಷದ ನಂತರ ಮತ್ತೆ ನಿಮ್ಮನ್ನು ನಿಲ್ಲಿಸುತ್ತೇನೆ. ಯಾವ ದಾರಿಯಲ್ಲಿ ನಡೆಯಬೇಕೆಂದು ನಾನು ತೋರಿಸಿಕೊಡುತ್ತೇನೆ ಎಂದು ಹೇಳಿದ್ದಾರೆ.