ಮಲ್ಪೆ,ಮಾ 06(MSP): ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವ ವೇಳೆ ವಿಷಜಂತು ಕಚ್ಚಿ ಅಸ್ವಸ್ಥಗೊಂಡಿದ್ದ ಕುಂದಾಪುರ ಕೊರವಡಿಯ ಮೀನುಗಾರ ಕೇಶವ(44) ಅವರು ಮಾ.5 ರ ಮಂಗಳವಾರ ಮೃತಪಟ್ಟಿದ್ದಾರೆ.
ಕಳೆದ 3 ವರ್ಷಗಳಿಂದ ಮಲ್ಪೆಯ ಜೈ ಭಾರತ್ ಬೋಟಿನಲ್ಲಿ ಮೀನುಗಾರಿಕೆ ಮಾಡಿಕೊಂಡಿದ್ದು, ಫೆ.25 ರಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ವಿಷಜಂತು ಕಚ್ಚಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತೆಗೆ ದಾಖಲಿಸಲಾಗಿತ್ತು. ಆದರೆ ಬಳಿಕ ಅಲ್ಲಿನ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೆ ಮಾ.2 ರಂದು ಅಲ್ಲಿಂದ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.