ಕುಂದಾಪುರ, ಡಿ 16 (DaijiworldNews/HR): ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಅಗತ್ಯ ಬಂಡವಾಳ ಹೂಡುವಂತೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಸಚಿವೆಯನ್ನು ಗುರುವಾರ ಬೇಟಿ ಮಾಡಿದ ಸಂಸದ ರಾಘವೇಂದ್ರ, ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಬಂಡವಾಳ ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು, ಕಾರ್ಯಪಡೆಯ ಸಾಮರ್ಥ್ಯ ಮತ್ತು ಚಾಲ್ತಿಯಲ್ಲಿರುವ ಕಾರ್ಮಿಕ ಸಂಸ್ಕೃತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಉಕ್ಕು ಪ್ರಾಧಿಕಾರದ ಮುಖೇನ ಅಗತ್ಯ ಬಂಡವಾಳವನ್ನು ಹೂಡಲು ಸೂಕ್ತ ಕ್ರಮವನ್ನು ಕೈಗೊಳ್ಳಲು ಕೋರಿ, ರಕ್ಷಣಾ, ಪರಮಾಣು, ಆಟೋಮೊಬೈಲ್ ಹಾಗೂ ರೈಲ್ವೆ ವಲಯಗಳ ವಿವಿಧ ಅಗತ್ಯತೆಗಳನ್ನು ಪೂರೈಸುವ ಮೂಲಕ ''ಆತ್ಮ ನಿರ್ಭರ ಭಾರತ' ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಕೊಡುಗೆ ನೀಡಬಹುದು ಎಂಬುದನ್ನು ಮನವಿ ಮಾಡಿದರು.
ಇನ್ನು ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.