ಮಂಗಳೂರು,ಮಾ 06(MSP): ತಣ್ಣೀರುಬಾವಿ ಸಮೀಪದ ತೋಟಬೆಂಗ್ರೆ 2018 ರ ನವೆಂಬರ್ ತಿಂಗಳಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 7 ಮಂದಿ ಆರೋಪಿಗಳ ವಿರುದ್ದ ನಗರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಗರದ ಮಹಿಳಾ ಠಾಣೆಯ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ತನ್ನ ಸ್ನೇಹಿತನೊಂದಿಗೆ ತೋಟ ಬೆಂಗ್ರೆಗೆ ಬಂದಿದ್ದ ಯುವತಿ ಮೇಲೆ ತಂಡ ಸಾಮೂಹಿಕ ಅತ್ಯಾಚಾರ ನಡೆಸಿತ್ತು. ಈ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳು ಅಪ್ರಾಪ್ತ ವಯಸ್ಕರಾಗಿದ್ದಾರೆ.
ಪ್ರಕರಣದ ತನಿಖೆ ನಡೆಸಿರುವ ಮಹಿಳಾ ಠಾಣೆ ಪೊಲೀಸರು ಕೆಲವು ದಿನಗಳ ಹಿಂದೆ ಆರೋಪಿಗಳ ವಿರುದ್ದ ನ್ಯಾಯಾಲಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಸಾಮೂಹಿಕ ಅತ್ಯಾಚಾರ , ಹಲ್ಲೆ ನಡೆಸಿ ಗಾಯಗೊಳಿಸಿರುವುದು, ಮಹಿಳೆಯ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವುದು ಸೇರಿದಂತೆ ಭಾರತೀಯ ದಂಡಸಂಹಿತೆಯ ನಾನಾ ಸೆಕ್ಷನ್ ಗಳಡಿ ಆರೋಪಗಳನ್ನು ದಾಖಲಿಸಿಕೊಳ್ಳಲಾಗಿದೆ.