ಬಂಟ್ವಾಳ, ಡಿ 17 (DaijiworldNews/DB): ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಪರಿಣಾಮ ಹಳೆಯ ಹಂಚಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಹಾನಿಯಾದ ಘಟನೆ ಇಲ್ಲಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟುವಿನಲ್ಲಿ ಡಿಸೆಂಬರ್ 16ರ ಶುಕ್ರವಾರ ತಡರಾತ್ರಿ ನಡೆದಿದೆ.
ದೇವಂದಬೆಟ್ಟು ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿದ ಹಂಚಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ್ದು, ಕೂಡಲೇ ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ಪುರುಷೋತ್ತಮ ,ರೋಹಿತ್, ಪ್ರಸಾದ್, ಗೃಹರಕ್ಷಕ ಸಿಬ್ಬಂದಿ ಜಯಗಣೇಶ್, ಚಾಲಕ ಕಿರಣ್ ಕುಮಾರ್ ಭಾಗವಹಿಸಿದ್ದರು.