ಮಂಗಳೂರು, ಮಾ 06(MSP): ಪ್ರಧಾನಿ ನರೇಂದ್ರ ಮೋದಿಯು ’ಆರ್ಎಸ್ಎಸ್ ರಿಮೋಟ್ ಕಂಟ್ರೋಲ್ ಆಗಿದ್ದಾರೆ ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಕಲಬುರ್ಗಿಯಲ್ಲಿ ಬುಧವಾರ ವಿವಿಧ ಕಾಮಗಾರಿಗಳ ಶಿಲಾನ್ಯಾಸ, ಲೋಕಾರ್ಪಣೆಗೊಳಿಸಿದ ನಂತರ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನ ರಿಮೋಟ್ ಕಂಟ್ರೋಲ್ ನಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ ಮತ್ತು ಕಾಂಗ್ರೆಸ್ ಗೆ ಅಧಿಕಾರದ ದಾಹ ಎಂದು ಸಮ್ಮಿಶ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ’ದೇಶದ ಪ್ರಧಾನಿಯವರು ರಾಜಕೀಯವಾಗಿ ಮಾತನಾಡಬೇಕು. ಆದ್ರೆ ಅಸಂಬದ್ಧವಾಗಿ ಮಾತನಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಿಮೋಟ್ ವ್ಯವಸ್ಥೆ ಇದೆಯೇ? ಎಂದು ಪ್ರಶ್ನಿಸಿದ್ದರು. ' ಪ್ರಧಾನಿ ನರೇಂದ್ರ ಮೋದಿ ಕೂಡ ರಿಮೋಟ್ ಕಂಟ್ರೋಲ್ ನಲ್ಲಿದ್ದಾರೆ. ಅವರನ್ನು ನಿಯಂತ್ರಿಸುವ ರಿಮೋಟ್ ಆರ್ಎಸ್ಎಸ್’ ವ್ಯಂಗ್ಯವಾಡಿದರು.