ಕುಂದಾಪುರ, ಡಿ. 19 (DaijiworldNews/SM): ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಚಾರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಭೂವಿಜ್ಞಾನಿ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಲಾರಿಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.