ಮಂಗಳೂರು, ಡಿ. 18 (DaijiworldNews/SM): ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಲಭಿಸಿದೆ.
ಸಮೀಪದಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ.
ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ಕಾಮಗಾರಿಯ ಹಿನ್ನೆಲೆಯಲ್ಲಿ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ಇದ್ದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಜನನಿಬಿಡ ಪ್ರದೇಶದಲ್ಲಿ ಗುಂಡಿ ತೋಡಲಾಗಿದ್ದು, ಕಾಮಗಾರಿ ಪೂರ್ತಿಗೊಳಿಸದೆ ಬಿಟ್ಟ ಕಾರಣ ಈ ದುರಂತ ಸಂಭವಿಸಿದೆ.