ಕುಂದಾಪುರ, ಡಿ 20 (DaijiworldNews/SM): ಕರ್ನಾಟಕದಲ್ಲಿ ಹಂಚಿಕೆ ಮಾಡಲು ಬಾಕಿ ಉಳಿದಿರುವ 6723 ಸಾವಿರ್ ಲೀಟರ್ ಸೀಮೆಎಣ್ಣೆ ಬಿಡಗಡೆಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿಯವರಿಗೆ ಮನವಿ ಮಾಡಿದ್ದಾರೆ.
ಅವರು ಇಂದು ಸಂಸತ್ ಭವನದಲ್ಲಿ ಪುರಿಯವರನ್ನು ಭೇಟಿಯಾಗಿ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆ.ಎಲ್. ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆ.ಎಲ್. ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.
ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್. ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್. ಮಾತ್ರ ಮಂಜೂರಾಗಿದೆ. ಆದ್ದರಿಂದ, ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡುಲು ಉಳಿದ 6,723 ಕೆಎಲ್ಗಳನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸಿದರು.
ಮಾನ್ಯ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.