ಮಂಗಳೂರು, ಮಾ 07(SM): ನಗರದ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಮಾರಾಮಾರಿ ಮುಂದುವರೆದಿದ್ದು, ಕೈದಿಯೋರ್ವನಿಗೆ ಇತರ ಕೈದಿಗಳು ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಪೋಕ್ಸೋ ಕಾಯ್ದೆಯಡಿಯಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಅಕ್ಸಾವುದ್ದೀನ್ ಹಲ್ಲೆಗೊಳಗಾದ ಕೈದಿ.
ಹಲ್ಲೆಗೊಳಗಾದ ಅಕ್ಸಾವುದ್ದೀನ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೊಳಗಾಗಿರುವ ಕೈದಿಯು ಪೊಕ್ಸೊ ಪ್ರಕರಣದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿತನಾಗಿದ್ದ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಏಕಾಏಕಿ ಇತರ ಕೈದಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಅಕ್ಸಾವುದ್ದೀನ್ ಗಂಭೀರ ಗಾಯಗೊಂಡಿದ್ದಾನೆ. ಕಾರಾಗೃಹದ ಅಧಿಕಾರಿಗಳು ತಕ್ಷಣ ಆತನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.