ಉಳ್ಳಾಲ, ಡಿ 24 (DaijiworldNews/DB): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕದ 2022-2025 ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ವಸಂತ ಕೊಣಾಜೆ, ಉಪಾಧ್ಯಕ್ಷರಾಗಿ ದಿನೇಶ್, ಆರಿಫ್ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಪೊಯ್ಯತ್ತಬೈಲ್, ಕಾರ್ಯದರ್ಶಿಗಳಾಗಿ ಸತೀಶ್ ಕೊಣಾಜೆ, ವಜ್ರೇಶ್ವರಿ, ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಸಾದ್ ಸುವರ್ಣ, ಶ್ವೇತಾ, ಶಿವಶಂಕರ್ ಅವಿರೋಧವಾಗಿ ಆಯ್ಕೆಗೊಂಡರು.
ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಪುಷ್ಪರಾಜ್ ಬಿ.ಎನ್. ಅವರು ನೂತನ ಪದಾಧಿಕಾರಿಗಳ ಘೋಷಣೆ ಮಾಡಿದರು. ಉಪ ಚುನಾವಣಾಧಿಕಾರಿ ರಾಜೇಶ್ ಕುಮಾರ್ ದಡ್ಡಂಗಡಿ, ಸಹಾಯಕ ಚುನಾವಣಾಧಿಕಾರಿ ಭರತ್ ರಾಜ್ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ, ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.