ಮಂಗಳೂರು, ಡಿ 25 ( DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ.
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕರಸಾ.ನಿಗಮ, ಕ.ಕ.ರ.ಸಾ.ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27 ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೇ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ.
ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ. 26 ರಿಂದ 28 ರವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಗಳು ಸಹಕರಿಸುವಂತೆ ಕರಾರಸಾನಿಗಮ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.