ಉಡುಪಿ,ಮಾ 07 (MSP): ಲೋಕಸಭಾ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಲ್ಲಿ 4 ಜನ ಆಕಾಂಕ್ಷಿಗಳು ಇದ್ದಾರೆ ಅನ್ನೋದನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಸ್ಪಷ್ಟಪಡಿಸಿದ್ದಾರೆ.
ಮಾ.೬ ರಂದು ನಡೆದ ಕೆಡಿಪಿ ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಜಯಮಾಲಾ ಬಹಿರಂಗಪಡಿಸಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ನ ಕಾರ್ಯದರ್ಶಿ , ಕೆಪಿಸಿಸಿ ಎನ್ಆರ್’ಐ ಸೆಲ್ ನ ಅಧ್ಯಕ್ಷೆ ಆರತಿ ಕೃಷ್ಣ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ವಿಜಯ ಕುಮಾರ್ ಈ ಬಾರಿಯ ಲೋಕಸಭಾ ಚುನಾವಣೆಗೆ ಆಕಾಂಕ್ಷಿಗಳಾಗಿದ್ಧಾರೆ.
ಆದರೆ ಹೈಕಮಾಂಡ್ ಯಾರ ಹೆಸರನ್ನು ಅಂತಿಮಗೊಳಿಸುತ್ತೆ ಅನ್ನೋದನ್ನು ಕಾದು ನೋಡಬೇಕಾಗಿದೆ ಎಂದು ಸಚಿವೆ ಜಯಮಾಲಾ ಹೇಳಿದ್ದಾರೆ. ಇನ್ನು ನಾನು ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲಾ ಅನ್ನೋದನ್ನು ಜಯಮಾಲಾ ಸ್ಪಷ್ಟಪಡಿಸಿದ್ದಾರೆ.