ಪುತ್ತೂರು, ಜ. 02 ( DaijiworldNews/SM): ದಲಿತ ಕುಟುಂಬಗಳು ಉಪಯೋಗಿಸುತ್ತಿದ್ದ ರಸ್ತೆಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪುತ್ತೂರು ಮಿನಿ ವಿಧಾನ ಸೌಧದ ಬಳಿ ಮೌನ ಪ್ರತಿಭಟನೆ ನಡೆಯಿತು.
ಕೆಮ್ಮಿಂಜೆ ಗ್ರಾಮದ ಕುದ್ಕೋಳಿ ಎಂಬಲ್ಲಿ ನಾಲ್ಕು ದಲಿತ ಕುಟುಂಬಗಳು ಉಪಯೋಗಿಸುತ್ತಿದ್ದ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೋರ್ವರು ಅಕ್ರಮ ಸಕ್ರಮದ ಮೂಲಕ ಅಕ್ರಮವಾಗಿ ಅತಿಕ್ರಮಣ ಮಾಡಿಕೊಂಡಿದ್ದಾರೆ.
ರಸ್ತೆಯನ್ನು ಕೂಡಲೇ ತೆರವು ಮಾಡಬೇಕೆಂದು ಸ್ಥಳೀಯರು ಎಲ್ಲಾ ಅಧಿಕಾರಿಗಳಿಗೂ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ದಲಿತ ಕುಟುಂಬಗಳು ಮೌನ ಪ್ರತಿಭಟನೆಯ ಮೊರೆ ಹೋಗಿದೆ.