ಉಳ್ಳಾಲ, ಜ. 04 ( DaijiworldNews/SM): ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ.
ರಸ್ತೆ, ಗುಂಡಿ, ಚರಂಡಿ ಬಗ್ಗೆ ಆಲೋಚನೆ ಮಾಡಬೇಡಿ ಅಂತ ಭಾವನಾತ್ಮಕ ವಿಚಾರ ತಂದಿದ್ದಾರೆ. ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದ.ಕ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ ಎಂದು ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ಬದುಕಿಸಲ್ಲ. ಅವರ ಇಂಜಿನ್ ಕಟ್ಟಿದ್ದು ಜನ ಸಾಮಾನ್ಯರ ಕಣ್ಣೀರಿನಲ್ಲಿ ಎಂದರು.
ಇನ್ನು ಮುಂದೆ ಇವರ ಇಂಜಿನ್ ನನ್ನ ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರಾಗಿದ್ದಾರೆ. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ಸಂಸದರು ಸಿಕ್ಕಿದಾಗ ಅವರಿಗೆ ನಾನು ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ. ನಾನು ಸಚಿವ ಆದಾಗಲೂ ಸೂಟ್ ಹಾಕಿಲ್ಲ, ಇನ್ನೂ ಹಾಕಲ್ಲ ಎಂದು ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.