ಮಂಗಳೂರು ನ 2: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಕ್ತಿ ನಗರದ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ. ಮೃತರನ್ನು ನಗರದ ಸಂಚಾರಿ ಪೂರ್ವ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಜಿನ್ನಪ್ಪ ಎಂಬರ ಪತ್ನಿ ಉಮಾ (26) ಎಂದು ಗುರುತಿಸಲಾಗಿದೆ. ಎಂದಿನಂತೆ ಪತಿ ಕೆಲಸಕ್ಕೆ ತೆರಳಿದ ಬಳಿಕ ಬೆಳಗ್ಗೆ ಸುಮಾರು 8.30 ರಿಂದ 9.30 ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ರಾಯಚೂರಿನವರಾಗಿರುವ ಉಮಾ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ನಾಲ್ಕು ವರ್ಷದ ಹಾಗೂ ಒಂದು ವರ್ಷದ ಎಳೆ ಕಂದನನ್ನು ಅಗಲಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.