ಮಂಗಳೂರು, ಜ 05 ( DaijiworldNews/MS): ನಗರದ ಹೊರವಲಯದಲ್ಲಿರುವ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಮಾಡುವ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಿಸಿಲ ಬೇಗೆಯಿಂದ ಮಿಥೇನ್ ಗ್ಯಾಸ್ ಉತ್ಪತ್ತಿಯಾಗಿ ಬೆಂಕಿ ಉತ್ಪತ್ತಿಯಾಗಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕೆನ್ನಾಲಿಗೆಗೆ ಕಾಣಿಸಿಕೊಂಡಿದೆ.
ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಘಟನೆಯಿಂದ ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಅವರಿಸಿದೆ. ಜೆಸಿಬಿ ಹಾಗೂ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದೆ.
ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಬೇಟಿ ಮಾಡಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, " ತ್ಯಾಜ್ಯ ವಿಳೇವಾರಿ ಘಟಕದ ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಶ್ರಮಿಸುತ್ತಿದ್ದು, ಇದು ತಹಬದಿಗೆ ಬರಲು 26 ಗಂಟೆಗಳಿಗೂ ಹೆಚ್ಚು ಕಾಲ ಬೇಕಾಗಬಹುದು . ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ಕುರಿತು ಚರ್ಚಿಸಿದ್ದು, ಬೆಂಕಿ ನಂದಿಸಲು ತಡವಾದ ಸ್ಥಳೀಯ ನಿವಾಸಿಗಳನ್ನು ತಾತ್ಕಲಿಕವಾಗಿ ಸ್ಥಳಾಂತರ ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದರು
ಸ್ಥಳೀಯ ಕಾರ್ಪೊರೇಟರ್ ಸಹಿತ ಇತರ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.