ಬಂಟ್ವಾಳ,ಮಾ.09(AZM):ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೇಂದ್ರ ಗೃಹ ಸಚಿವರಾದ ರಾಜ್ ನಾಥ್ ಸಿಂಗ್ ಅವರು ಭಾಗಿಯಾಗಿ , ರಾಜರಾಜೇಶ್ವರಿ ದೇವಿಯ ದರ್ಶನ ಪಡೆದರು.
ಇಂದು ಮಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವರಾದ ರಾಜ್ ನಾಥ್ ಸಿಂಗ್ ಅವರು, ಬಂಟ್ವಾಳದ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಗೃಹ ಸಚಿವರಿಗೆ ವಿಶೇಷ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್,ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.