ಉಡುಪಿ, ಜ 12 (DaijiworldNews/SM): ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾಅಭಿವೃಧ್ದಿ ಸಮನ್ವಯ ಮತ್ತುಉಸ್ತುವಾರಿ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ರೈಲುಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಹೆಚ್ಚಿನ ದೂರುಗಳು ದಾಖಲಾಗುತ್ತಿವೆ. ಸಾರ್ವಜನಿಕರು ಈ ಕುರಿತುತೀವ್ರವಾಗಿ ಆರೋಪಗಳನ್ನು ಮಾಡುತ್ತಿದ್ದು, ರೈಲ್ವೆಇಲಾಖೆಯ ಅಧಿಕಾರಿಗಳು ಕಳ್ಳತನ ತಡೆಯಲುಕೂಡಲೇ ಮುಂಜಾಗ್ರತಕ್ರಮಗಳನ್ನು ಕೈಗೊಳ್ಳಬೇಕು.ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಅಳವಡಿಕೆ, ಪ್ರಯಾಣಿಕರಿಗೆ ಲಾಕರ್ಗಳ ವ್ಯವಸ್ಥೆ ಮಾಡಬೇಕು. ಎಲ್ಲಾರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದಕೇಂದ್ರ ಸಚಿವರು, ಈ ಬಗ್ಗೆ ದೆಹಲಿಯಲ್ಲಿಇಲಾಖೆಯ ಅಧಿಕಾರಿಗಳೊಂದಿಗೆ ಕೂಡಾ ಚರ್ಚಿಸುವುದಾಗಿ ತಿಳಿಸಿದರು.
ರೈಲ್ವೆ ನಿಲ್ದಾಣಕ್ಕೆ ತೆರಳುವರಸ್ತೆಯದುರಸ್ತಿ ಕುರಿತಂತೆರೈಲ್ವೆ, ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆಅಧಿಕಾರಿಗಳು ಜಂಟಿಯಾಗಿ ಸ್ಥಳ ತನಿಖೆ ನಡೆಸಿ, ಶೀಘ್ರದಲ್ಲಿ ಪ್ರಯಾಣಿಕರಿಗೆಉತ್ತಮರಸ್ತೆ ಸೌಲಭ್ಯಒದಗಿಸುವಂತೆ ಹಾಗೂ ಪರಸ್ಪರ ಸಮನ್ವಯದಿಂದಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕಟಪಾಡಿ, ಉಡುಪಿ ಮತ್ತು ಪಡುಬಿದ್ರಿ ಜಂಕ್ಷನ್ಗಳಲ್ಲಿ ಅಪಘಾತಗಳನ್ನು ತಡೆಯಲು ಮತ್ತು ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸಿಗ್ನಲ್ ಅಳವಡಿಸಬೇಕು, ಕರಾವಳಿ- ಮಲ್ಪೆರಸ್ತೆಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವಂತೆ ಹಾಗೂ ಪರ್ಕಳದಲ್ಲಿ ತ್ವರಿತಗತಿಯಲ್ಲಿಕಾಮಗಾರಿ ಕೈಗೊಳ್ಳುವಂತೆ ಮತ್ತುಯಾವುದೇ ಕಾನೂನು ತೊಡಕುಗಳಿದ್ದಲ್ಲಿ ಶೀಘ್ರದಲ್ಲಿ ಬಗೆಹರಿಸಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನ ಮಂತ್ರಿಆವಾಸ್ಯೋಜನೆಯಡಿ ನಗರ ಪ್ರದೇಶದಜನತೆಗೆ ಮನೆ ನಿರ್ಮಾಣಕುರಿತಂತೆ ವ್ಯಾಪಕ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಪೂರ್ಣಗುರಿ ಸಾಧಿಸುವಂತೆ ಹಾಗೂ ಮನೆ ನಿರ್ಮಾಣಕ್ಕೆ ಸುಲಭರೀತಿಯಲ್ಲಿ ಸಾಲ ದೊರೆಯುವಂತೆಕ್ರಮ ಕೈಗೊಳ್ಳಿ ಎಂದರು.
ಜಿಲ್ಲೆಯ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗೇರು ಬೆಳೆಗಾರರಿಗೆ ಉತ್ತಮ ತಳಿಯ ಕಸಿ ಗಿಡ ಮತ್ತು ಹೆಚ್ಚು ಇಳುವರಿ ನೀಡುವ ಗೇರು ಗಿಡಗಳನ್ನು ಸರಬರಾಜು ಮಾಡುವಂತೆ ಸೂಚಿಸಿದ ಸಚಿವರು, ಕಿರು ಆಹಾರ ಉದ್ದಿಮೆ ಸ್ಥಾಪನೆ ಕುರಿತಂತೆ ಮೀನುಗಾರಿಕೆ ಇಲಾಖೆ ವತಿಯಿಂದ ರೈತರ ಉತ್ಪಾದಕ ಸಂಸ್ಥೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡುವಂತೆ ತಿಳಿಸಿದರು.
ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 7 ಲಕ್ಷ ಮಾನವ ಗುರಿ ಸೃಜನೆಗೆ ಇದುವರೆಗೆ 7.35 ಲಕ್ಷ ದಿನಗಳನ್ನು ಸೂಜಿಸಲಗಿದ್ದು, ಕೆರೆ ಸಂಜೀವಿ ಯೋಜನೆಯಡಿ 75 ಕೆರೆಗಳನ್ನು ಆಭಿವೃದ್ದಿಗೊಳಿಸುತ್ತಿದ್ದು ಈಗಾಗಲೇ 15 ಕಾಮಗಾರಿ ಮುಕ್ತಾಯಗೊಂಡಿದ್ದು, 60 ಪ್ರಗತಿಯಲ್ಲಿವೆ. ಗ್ರಾಮೀಣ ಭಾಗದಲ್ಲಿ 963 ಕಾಲು ಸಂಕಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಿದ್ದು, ಈ ವಷಾಂತ್ಯದೊಳಿಗೆ ಸಂಪೂರ್ಣ ಗುರಿ ಸಾಧಿಸುವ ಮೂಲಕ ಜಿಲ್ಲೆಯನ್ನು ಕಚ್ಛಾ ಕಾಲುಸಂಕ ಮುಕ್ತ ಜಿಲ್ಲೆಯನ್ನಾಗಿಸಲಾಗುವುದುಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ,ಕೆ.ರಘುಪತಿ ಭಟ್, ಲಾಲಾಜಿಆರ್ ಮೆಂಡನ್, ಸುಕುಮಾರ ಶೆಟ್ಟಿ, ನಗರಸಭೆಅಧ್ಯಕ್ಷೆ ಸುಮಿತ್ರಾಆರ್ನಾಯಕ್, ಜಿಲ್ಲಾಧಿಕಾರಿಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ತರಬೇತಿ ನಿರತಐ.ಎ.ಎಸ್ಅಧಿಕಾರಿಯತೀಶ್ ಹಾಗೂ ವಿವಿಧಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.