ಉಡುಪಿ, ಜ 16 (DaijiworldNews/HR): ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯಎಂದು ಶಾಸಕ ರಘುಪತಿ ಭಟ್ ಹೇಳಿದರು.
ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತಆಶ್ರಯದಲ್ಲಿ ಆಯೋಜಿಸಿದ್ದ ಯೋಗಥಾನ್ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಸಂಸ್ಥೆಯು ಭಾರತದ ಯೋಗ ಪದ್ದತಿಯ ಮಹತ್ವವನ್ನು ಜಗತ್ತಿಗೆ ಸಾರಲು ಜೂನ್ 21 ರಂದು ವಿಶ್ವದಾದ್ಯಂತ ವಿಶ್ವಯೋಗ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡುವ ಮೂಲಕ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ, ನಿರಂತರವಾಗಿಯೋಗ ಅಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಿದೆ, ಒತ್ತಡ ನಿವಾರಣೆಗೆ ಯೋಗ ಪರಿಹಾರ ನೀಡಲಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಒತ್ತಡ ಮುಕ್ತ ಮತ್ತುಆರೋಗ್ಯಯುತಜೀವನ ನಡೆಸಲು ಸಾಧ್ಯಎಂದರು.
ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತುಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕಡಾ.ರೋಶನ್ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಡಿಡಿಪಿಐ ಗಣಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಹೆಯ ಕರ್ನಲ್ ಪ್ರಕಾಶ್, ಡಾ.ವಿನೋದ್ ಮತ್ತಿತರರು ಉಪಸ್ಥಿತರಿದ್ದರು.