ಮಂಗಳೂರು, ಜ 16 (DaijiworldNews/SM): ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದ ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ.
ಸೋಮವಾರ ರಾತ್ರಿ ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ.