ಕುಂದಾಪುರ, ಜ 17 ( DaijiworldNews/MS): ಮಗು ಸಾವನ್ನಪ್ಪಿದ ಚಿಂತೆಯಲ್ಲಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೆಸ್ಕತ್ತೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೆಸ್ಕತ್ತೂರು ಗ್ರಾಮದ ನಿವಾಸಿ 33ವರ್ಷದ ರವೀಂದ್ರ ಕುಲಾಲ್ ಎಂದು ಗುರುತಿಸಲಾಗಿದೆ.
ರವೀಂದ್ರ ಕುಲಾಲ್ ಅವರ ಒಂದೂವರೆ ತಿಂಗಳಿನ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ರವೀಂದ್ರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದು, ನಿನ್ನೆ ಮಧ್ಯಾಹ್ನ ಮನೆಯಲ್ಲಿ ಗಲಾಟೆ ಮಾಡಿ ಮನೆಯವರೆಲ್ಲರನ್ನು ಮನೆಯಿಂದ ಹೊರಗಡೆ ಕಳುಹಿಸಿದ್ದರು. ಬಳಿಕ ಮನೆಯ ಮಾಡಿನ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.