ಸುಬ್ರಹ್ಮಣ್ಯ , ಜ 19 ( DaijiworldNews/MS): ರಾಜ್ಯದಲ್ಲಿ ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
img src=https://daijiworld.ap-south-1.linodeobjects.com/Linode/img_tv247/ms-241122-nagesh.jpg>
ನೂತನ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಆಯ್ದ ಶಾಲೆಗಳಲ್ಲಿ ಅನುಷ್ಠಾನಗೊಳಿಸುತ್ತೇವೆ. ಮುಂದಿನ ವರ್ಷದಿಂದ ಪೂರ್ಣವಾಗಿ ಆರಂಭಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ ಎಂದು ಹೇಳಿದ್ದಾರೆ.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ.