ಉಡುಪಿ, ಜ 19 (daijiworldNews/SM): ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ನೀಡಿರುವ ಆಧಾರ್ ವಿಶಿಷ್ಠ ಗುರುತಿನಚೀಟಿಯನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಗಳೂ ಮಾಡಿಸಿಕೊಳ್ಳಬೇಕು. ಈಗಾಗಲೇ ಆಧಾರ್ಕಾರ್ಡ್ ನೊಂದಣಿಯನ್ನು ೧೦ ವರ್ಷಗಳ ಹಿಂದೆ ಮಾಡಿಸಿದ್ದವರು ತಮ್ಮ ವಿಳಾಸ ಗುರುತಿನ ದಾಖಲೆಗಳನ್ನು ನೀಡುವುದರೊಂದಿಗೆಕಡ್ಡಾಯವಾಗಿನವೀಕರಣಗೊಳಿಸಿಕೊಳ್ಳಬೇಕು ಎಂದರು.
ಈಗಾಗಲೇ ಜಿಲ್ಲೆಯಲ್ಲಿ೫ ವರ್ಷದೊಳಗಿನ ೪೨೩೧೨ ಮಕ್ಕಳುಆಧಾರ್ ನೊಂದಣಿ ಮಾಡಿಸಿಕೊಂಡಿದ್ದು, ಕೈ ಬೆರಳಚ್ಚು ಮತ್ತುಕಣ್ಣಿನ ಸ್ಕ್ಯಾನ್ ಸೇರಿದಂತೆ ಮತ್ತಿತರ ಬಯೋಮೆಟ್ರಿಕ್ ನೀಡದೇಇರುವ, ಪ್ರತಿಯೊಬ್ಬಆಧಾರ್ ನೊಂದಣಿ ಮಾಡಿಸಿಕೊಂಡಿರುವ ಮಕ್ಕಳು ಬಯೋಮೆಟ್ರಿಕ್ನೀಡಬೇಕುಎಂದರು.
ಜಿಲ್ಲೆಯಲ್ಲಿ ೧೩ ಲಕ್ಷಕ್ಕೂಅಧಿಕಜನರುಆಧಾರ್ ನೊಂದಣಿಯನ್ನು ಮಾಡಿಸಿಕೊಂಡಿದ್ದು ,ಅದರಲ್ಲಿ೧೫ ವರ್ಷ ಮೇಲ್ಪಟ್ಟ೨ ಲಕ್ಷಜನರುತಮ್ಮ ಮೊಬೈಲ್ ಸಂಖ್ಯೆಜೋಡಣೆಯನ್ನು ಮಾಡಿಸದೇಇದ್ದುಅಂತಹವರುತಮ್ಮ ಮೊಬೈಲ್ ಸಂಖ್ಯೆಯನ್ನುಜೋಡಣೆಮಾಡಿಕೊಳ್ಳಬೇಕುಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ಪಡೆಯಲುಆಧಾರ್ ಸಂಖ್ಯೆ ಪ್ರಮುಖ ಪಾತ್ರ ವಹಿಸುತ್ತಿದೆ.ಆಧಾರ್ ಸಂಖ್ಯೆಯು ಬ್ಯಾಂಕ್ಖಾತೆಜೋಡಣೆ ಹೊಂದಿ, ಸರ್ಕಾರದ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ಗಳ ಖಾತೆಗೆ ವರ್ಗಾಯಿಸಲು ಸಹ ಸುಲಭವಾಗಲಿದೆ ಎಂದರು.