ಬಂಟ್ವಾಳ, ಮಾ 12(SM): ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಮೃತರನ್ನು ನೇರಳಕಟ್ಟೆ ಸಮೀಪದ ಪರ್ಲೋಟು ನಿವಾಸಿ ಬೀಡಿ ಗುತ್ತಿಗೆದಾರ ಖಾಸೀಂ(68) ಗುರುತಿಸಲಾಗಿದೆ. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಸಂಚರಿಸುತ್ತಿದ್ದ ಬೈಕೊಂದು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ನೇರಳಕಟ್ಟೆ ಬಸ್ಸು ನಿಲ್ದಾಣ ಎದುರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಸಿಂ ಎಂಬವರಿಗೆ ಸೋಮವಾರ ಬೆಳಿಗ್ಗೆ ಡಿಕ್ಕಿಹೊಡೆದಿತ್ತು.
ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.