ಕಾಸರಗೋಡು, ಜ 28 (DaijiworldNews/HR): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿ ಈ ಬಾರಿ ಕಾಸರಗೋಡು ಎಡನೀರು ಮಠಕ್ಕೆ ಲಭಿಸಿದೆ.
ಶ್ರೀ ಎಡನೀರು ಮಠವು ಧಾರ್ಮಿಕ ಪೀಠವಾದರೂ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಪರ ಹೋರಾಟಗಳಲ್ಲಿ ನಿರತವಾಗಿರುವ ಸಾಂಸ್ಕೃತಿಕ ಪೀಠವಾಗಿದೆ.
ಎಡನೀರು ಮಠದೊಂದಿಗೆ ಇನ್ನೂ ಇಬ್ಬರು ಸಾಧಕರು ಗಡಿನಾಡ ಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಫೆಬ್ರವರಿ 2ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ.ಸಿ.ಸೋಮಶೇಖರ ಅವರು ತಿಳಿಸಿದ್ದಾರೆ.