ಮಂಗಳೂರು, ಫೆ 01 (DaijiworldNews/DB): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಮಾತೆ ವಿಕ್ರಮ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ನೂತನ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ವಾಗತಿಸಲಾಯಿತು.
ಈ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ನೂತನ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಸ್ವಾಗತಿಸಿದರು.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನಿನ್ನೆಯಷ್ಟೇ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅವರಿಂದ ತೆರವಾದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಅಮಾತೆ ವಿಕ್ರಮ್ ಅವರನ್ನು ನಿಯೋಜನೆಗೊಳಿಸಲಾಗಿತ್ತು.