ಉಡುಪಿ, ಫೆ (DaijiworldNews/HR): ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ ಮೆಂಟ್ ಕಾಮಗಾರಿ ನಿರ್ಮಾಣ ಸಮಯವಾದ ಫೆ.05 ರಿಂದ ಎಪ್ರಿಲ್ 05ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ತಾತ್ಕಾಲಿಕ ಅಧಿಸೂಚನೆಯ ಆದೇಶವನ್ನು ಹೊರಡಿಸುವಂತೆ ಕಾರ್ಯಪಾಲಕ ಇಂಜಿನಿಯರ್, ಲೋಕಪಯೋಗಿ ಇಲಾಖೆ , ಶಿವಮೊಗ್ಗ ವಿಭಾಗ, ಶಿವಮೊಗ್ಗ ಅವರು ಸೂಚಿಸಿದ್ದಾರೆ.
ಈ ಬಗ್ಗೆ ವರದಿಗಳನ್ವಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೇ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ಮಾಡುವ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧ ಹಾಗೂ ಅನುಬಂಧ ಅ ರಲ್ಲಿ ತಿಳಿಸಿರುವಂತೆ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಬಹುದಾಗಿ ವರದಿ ಸಲ್ಲಿಸಿದ್ದಾರೆ.
ಕಾರ್ಯಪಾಲಕ ಇಂಜಿನಿಯರ್, ಲೋಕಪಯೋಗಿ ಇಲಾಖೆ , ಶಿವಮೊಗ್ಗ ವಿಭಾಗ ಪೊಲೀಸ್ ಅಧೀಕ್ಷಕರು ಉಡುಪಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಉಡುಪಿ ರವರು ಸಲ್ಲಿಸಿರುವ ವರದಿಯನ್ನು ಪರಿಗಣಿಸಿ ಕೂರ್ಮಾರಾವ್.ಎಂ ಜಿಲ್ಲಾದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಉಡುಪಿ ಜಿಲ್ಲೆ ಇವರು ಸಾರ್ವಜನಿಕ ಹಿತ ದೃಷ್ಠಿಯಿಂದ ಫೆ.05 ರಿಂದ ಏಪ್ರಿಲ್ 05ರವರೆಗೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ ಮೆಂಟ್ ಮಾಡುವ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಿಸಿದೆ ಹಾಗೂ ಈ ಕೆಳಕಂಡ ಬದಲೀ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ- ಹೆಬ್ರಿ - ಉಡುಪಿ - ಕುಂದಾಪುರ ರಸ್ತೆಯ ಮೂಲಕ ಸಂಚರಿಸುವುದು.
ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ಮೂಲಕ ಸಂಚರಿಸುವುದು.
ತೀರ್ಥಹಳ್ಳಿ-ಯಡೂರು-ಹುಲಿಕಲ್-ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ನಗರ-ಕೊಲ್ಲೂರು-ಕುಂದಾಪುರ ( RLW 16200 KG ವರೆಗೆ ಭಾರಿ ಸರಕು ವಾಹನಗಳ ಸಂಚಾರಕ್ಕೆ ಮಾತ್ರ)
ಹೊಸನಗರ-ನಗರ-ಕೊಲ್ಲೂರು-ಕುಂದಾಪುರ ರಸ್ತೆ ಭಾರಿ ಸರಕು ವಾಹನ Multi axle, A/V ಯನ್ನು ಹೊರತುಪಡಿಸಿ ಲಘು ಸರಕು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ.