ವಿಟ್ಲ, ಫೆ 06 (DaijiworldNews/HR): ವಿಟ್ಲ ಸಮೀಪದ ಕಾಂತಡ್ಕದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿರುವುದಾಗಿ ವರದಿಯಾಗಿದೆ.
ಇನ್ನು ಮನೆಮಂದಿ ರಾತ್ರಿ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕಾಗಮಿಸಿದ ವಿಟ್ಲ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.