ಮಂಗಳೂರು, ಫೆ 07 ( DaijiworldNews/MS): ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್ನ ಬಹುತೇಕ ವಿದ್ಯಾರ್ಥಿನಿಯರು ವಾಂತಿ, ತಲೆಸುತ್ತುವಿಕೆಯಿಂದ ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿತ್ತು.