ಉಡುಪಿ, ಫೆ 07 (DaijiworldNews/HR): ರಾಷ್ಟಿಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆಕಾಮಗಾರಿಗೆ ಪರ್ಕಳ ವ್ಯಾಪ್ತಿಯಲ್ಲಿಇರುವಎಲ್ಲಾ ಬಗೆಯ ಅಡೆತಡೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಿ, ನಿಗಧಿತ ಅವಧಿಯೊಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ರಾಷ್ಟಿಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಸೂಚನೆ ನೀಡಿದರು.
ಇಂದು ಉಡುಪಿ ತಾಲೂಕುಕಚೇರಿಯಲ್ಲಿ, ರಾಷ್ಟಿಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ ನಿಂದ ತಡೆ ಇರುವ ಬಗ್ಗೆ ರಾಷ್ಟಿಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು.ಕಾಮಗಾರಿಯ ಅನುಷ್ಠಾನಕ್ಕೆ ಈಗಾಗಲೇ ಸಾಕಷ್ಟು ಸಾರ್ವಜನಿಕ ಮೊತ್ತವನ್ನು ವೆಚ್ಚ ಮಾಡಿದ್ದು, ಕಾಮಗಾರಿಯು ಸ್ಥಗಿತಗೊಂಡರೆ ಮಳೆಗಾಲದ ವೇಳೆಯಲ್ಲಿ ಇದುವರೆಗೆ ಮಾಡಿರುವಕಾಮಗಾರಿ ಹಾಳಾಗುವ ಜೊತೆಗೆ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಸಹ ತೀವ್ರ ತೊಂದರೆಯಾಗಲಿದ್ದು, ಈ ಎಲ್ಲಾಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಈ ಬಗ್ಗೆ ವಕೀಲರ ಮೂಲಕ ಚರ್ಚಿಸಿ, ಕಾನೂನು ವ್ಯಾಪ್ತಿಯಲ್ಲಿ ಪ್ರಕರಣವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ, ಕಾಮಗಾರಿ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
169ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಯ ಭೂ-ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮೀನು ಮಾಲೀಕರುಗಳಿಗೆ ಸೂಕ್ತ ಪರಿಹಾರದ ಮೊತ್ತವನ್ನುಆದ್ಯತೆಯಲ್ಲಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭೂ-ಸ್ವಾಧೀನಕ್ಕೆ ಸಂಬಂಧಪಟ್ಟ ದಾಖಲೆಗಳಲ್ಲಿ ದೋಷಗಳಿದ್ದಲ್ಲಿ ತಕ್ಷಣದಲ್ಲಿಇತ್ಯರ್ಥಪಡಿಸುವಂತೆ ಭೂ ಧಾಖಲೆಗಳ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು,ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದು ರಾಷ್ಟಿಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಉಡುಪಿ ತಹಸೀಲ್ದಾರ್ ಭೀಮಸೇನ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ರಾಷ್ಟಿಯ ಹೆದ್ದಾರಿ 169ಎ ನ ಇಂಜನಿಯರ್ ನಾಗರಾಜ್ಹಾಗೂ ಮತ್ತಿತರರು ಉಪಸ್ಥಿತರಿದ್ದರು.