ಮೂಲ್ಕಿ, ಫೆ 07 ( DaijiworldNews/SM): ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಇವರು ಅತಿಥಿ ಉಪನ್ಯಾಸಕಿಯಾಗಿದ್ದು, ವಾಮದಪದವು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು. ಇವರ ಸಾವಿನ ಸುದ್ದಿ ತಿಳಿದು ಇಡೀ ಕಾಲೇಜು ಇಂದು ಮೌನವಾಗಿದೆ. ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821