ಪುತ್ತೂರು, ಫೆ 11 ( DaijiworldNews/MS): ಇಂದು ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಫೆ.11ರಂದು ಅಪರಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಭದ್ರತೆ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪುತ್ತೂರು ವಲಯ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ,ಶೇಂದಿ ಮಾರಾಟ,ದಾಸ್ತಾನು,ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದ್ದು ಎಲ್ಲಾ ರೀತಿಯ ಮದ್ಯ, ಶೇಂದಿ ಅಂಗಡಿಗಳನ್ನು ಫೆ.11ರಂದು ಅಪರಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ರವರು ಆದೇಶ ಹೊರಡಿಸಿದ್ದಾರೆ.