ಬಂಟ್ವಾಳ, ಫೆ. 15 (DaijiworldNews/SM): ಪುದು ಗ್ರಾ.ಪಂ.ಚುನಾವಣೆ ಫೆ.25 ರಂದು ನಡೆಯಲಿದ್ದು, ಒಟ್ಟು 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.
ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಒಂದು ನಾಮಪತ್ರ ತಿರಸ್ಕೃತ ಗೊಂಡಿದ್ದು, ಉಳಿದಂತೆ 102 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ. ಬಾರೀ ಕುತೂಹಲ ಕೆರಳಿಸಿರುವ ಪುದು ಗ್ರಾಮಪಂಚಾಯತ್ ನಲ್ಲಿ ಈ ಬಾರಿ ಅತೀ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕಾಂಗ್ರೆಸ್ ಬಿಜೆಪಿ,ಎಸ್. ಡಿ.ಪಿ.ಐ. ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ಜೊತೆ ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಗ್ರಾ.ಪಂ.ಚುನಾವಣೆಯಲ್ಲಿ ಅಭ್ಯರ್ಥಿಗಳ ಕೊರತೆಯ ನಡುವೆಯೂ ಈ ರೀತಿಯ ದಾಖಲೆಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದು ಅಚ್ಚರಿ ಮೂಡಿದೆ. ಫೆ.17 ರಂದು ನಾಮಪತ್ರ ಹಿಂದೆಗೆಯಲು ಕೊನೆಯ ದಿನವಾಗಿದ್ದು, ರಾಜಕೀಯ ತಂತ್ರಗಾರಿಕೆಯ ಮಧ್ಯೆ ಏನಾಗುತ್ತದೆ. ಯಾರು ಕಣದಲ್ಲಿ ಉಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.