ಮಂಗಳೂರು, ಫೆ. 15 (DaijiworldNews/SM): ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ನಗರ ಹೊರವಲಯದ ಕೂಳೂರು ಬಳಿ ಅಪಘಾತ ನಡೆದಿತ್ತು. ಅಪಘಾತಕ್ಕೆ ಸಂಬಂಧಿಸಿದಂತೆ ಆರೋಪಿ ಬಸ್ ಚಾಲಕನಿಗೆ ಶಿಕ್ಷೆ ವಿಧಿಸಲಾಗಿದೆ.
2020ರಲ್ಲಿ ಮಂಗಳೂರು-ಉಡುಪಿ ರಾ.ಹೆ.66ರ ಕೂಳೂರು ಸೇತುವೆ ಬಳಿ ಅಪಘಾತ ನಡೆದಿತ್ತು. ನಗರದಿಂದ ಸುರತ್ಕಲ್ ಕಡೆಗೆ ಸಂಚರಿಸುತ್ತಿದ್ದ ಬೈಕ್ಗೆ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಇದರಿಂದ ಬೈಕ್ ಸವಾರ ಅಹ್ಮದ್ ಕಬೀರ್ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಬೈಕ್ ಸವಾರ ಮೃತಪಟ್ಟಿದ್ದರು. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನಗರದ ಎರಡನೇ ಜೆಎಂಎಫ್ಸಿ ನ್ಯಾಯಾಲಯವು ಆರೋಪಿ ಬಸ್ ಚಾಲಕ ಸೀತಾರಾಮನಿಗೆ 6 ತಿಂಗಳ ಸಾದಾ ಶಿಕ್ಷೆ ಮತ್ತು 6000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಧೀಶೆ ಅಂಜಲಿ ಶರ್ಮಾ ಸಾಕ್ಷಿಗಳ ಹೇಳಿಕೆ ಆಧರಿಸಿ ಆರೋಪಿಗೆ 6 ತಿಂಗಳ ಸಾದಾ ಶಿಕ್ಷೆ ಹಾಗೂ 6 ಸಾವಿರ ರೂ. ದಂಡವನ್ನು ತೆರಲು ಆದೇಶಿದಿದ್ದಾರೆ.