ಮಂಗಳೂರು, ನ 3: ನಾಳೆ ಸಿಎಂ ಸಿದ್ಧರಾಮಯ್ಯ ಮಂಗಳೂರಿಗೆ ಆಗಮಿಸಲಿದ್ದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಇಂಡಿಯನ್ ಕರಾಟೆಯ ರಾಷ್ಟ್ರೀಯ ಮುಕ್ತ ಚಾಂಪಿಯನ್ ಶಿಪ್ ಉದ್ಘಾಟಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ನೆಹರೂ ಮೈದಾನದಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಎರಡು ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ದೇಶದ ಮೂಲೆ ಮೂಲೆಗಳಿಂದ ಕರಾಟೆ ಪಟುಗಳು ಆಗಮಿಸಲಿದ್ದು ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.
ಜಿಲ್ಲೆಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಂಡಿಯನ್ ಕರಾಟೆಯ ರಾಷ್ಟ್ರೀಯ ಮುಕ್ತ ಚಾಂಪಿಯನ್ ಶಿಪ್ ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿದ್ದು, ಐತಿಹಾಸಿಕ ಟೂರ್ನಿಗೆ ಸಾವಿರಾರು ಜನ ಸಾಕ್ಷಿಯಾಗುವ ನೀರಿಕ್ಷೆಯಿದೆ