ವಿಟ್ಲ, ಫೆ 23 (DaijiworldNews/HR): ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ.
ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯ ಬೇಕಿದೆ..