ಮಣಿಪಾಲ, ಫೆ 23 (DaijiworldNews/HR): ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಹೋಟೆಲ್ನ ಮೇನೇಜರ್ ಸಂಪತ್ ಕುಮಾರ್ ಮತ್ತು ಕೆಲಸಕ್ಕೆ ಇರುವ ಸಂತೋಷ್ ಮತ್ತು ದಿನೇಶ್ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.