ಮಂಗಳೂರು, ಫೆ 24 (DaijiworldNews/HR): ಕಳವಾದ/ಕಳೆದುಹೋದ/ಸುಲಿಗೆಯಾದ ಮೊಬೈಲ್ ಫೋನ್ಗಳನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು ಅದರ ವಾರಸುದಾರರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಕಳವಾದ ಮೊಬೈಲ್ ಫೋನ್ಗಳ ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ ಅಂತಹ ಫೊನ್ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆಯನ್ನು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯು CEIR Portal ಮೂಲಕ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿದೆ. ಅಲ್ಲದೆ 4 ಮೊಬೈಲ್ ಫೋನ್ಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ನಗರ, ಸುಳ್ಯ ಪೊಲೀಸ್ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಮೊಬೈಲ್ ಕಳೆದು ಹೋದರೆ, ಕಳವಾದರೆ, ಸುಲಿಗೆಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ನಲ್ಲಿ ನಮೂದಿಸಬೇಕು. ಇದರಿಂದ ಕಳೆದು ಹೋದ, ಕಳವಾದ, ಸುಲಿಗೆಯಾದ ಮೊಬೈಲ್ ಫೋನ್ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಎಸ್ಪಿ ಮನವಿ ಮಾಡಿದ್ದಾರೆ.