ಕಾಪು, ಫೆ 24 (DaijiworldNews/HR): ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪು ಪೊಲೀಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ.
ಆಂಧ್ರಪ್ರದೇಶದ ಸುನಿಲ್ (29) ಬಂಧಿತ ಆರೋಪಿ.
ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ರಾಘವೇಂದ್ರ ಕಿಣಿ ಅವರು ದೂರು ನೀಡಿದ್ದರು. ಕೂಡಲೇ ಕಾರ್ಯಚರಣೆಗಿಳಿದ ಕಾಪುವಿನ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ಇಂದು ಬೆಳಿಗ್ಗೆ ಅಂಗಡಿಗೆ ಕರೆತಂದು ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.