ಮಂಗಳೂರು, ಫೆ 24 (DaijiworldNews/HR): ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲ ರೀತಿಯ ಅಕ್ರಮ ಚಟುವಟಿಕೆ ತಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.