ಕಾಸರಗೋಡು,ಮಾ.16(AZM):ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಬಿ.ಸುಬ್ಬಯ್ಯ ರೈ ಯವರು ಆಯ್ಕೆಯಾಗುವ ಸಾಧ್ಯತೆ ಇದೆ.
ವರ್ಷಗಳ ಬಳಿಕ ಕಾಸರಗೋಡು ಲೋಕಸಭಾ ಕ್ಷೇತ್ರಕ್ಕೆ ಕನ್ನಡಿಗರೊಬ್ಬರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು ಅಂತಿಮ ಪಟ್ಟಿಯಲ್ಲಿ ಸುಬ್ಬಯ್ಯ ರೈ ಹೆಸರು ಕೇಳಿ ಬರುತ್ತಿದೆ. ಮಾಜಿ ಸಂಸದ ದಿ.ರಾಮ ರೈ ಅವರ ಪುತ್ರರಾಗಿರುವ ಇವರು,ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದು,ಕಾಂಗ್ರೆಸ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಹಾಗೂ 2012ರಲ್ಲಿ ಕೇರಳ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಕಾಸರಗೋಡು ಕನ್ನಡ ಪರ ಹೋರಾಟದಲ್ಲಿ ಮುಂಚೂಣೆಯಲ್ಲಿದ್ದರು.
ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆಯಾಗಿದ್ದು, ಅವರ ಕುಟುಂಬಕ್ಕೆ ರಾಹುಲ್ ಗಾಂಧಿಯವರು ಭೇಟಿಯಾಗಿದ್ದರು. ಈ ಎಲ್ಲಾ ಬೆಳವಣಿಗೆಯು ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಈ ಹಿನ್ನಲೆ ಕನ್ನಡ, ಮಲಯಾಳಂ ಎರಡೂ ಭಾಷೆಯ ಹಿಡಿತ ಇರುವ ಬಿ.ಸುಬ್ಭಯ್ಯ ರೈ ಅವರನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್ ನಡೆಸಿರುವ ಜಾಣತನ ಎನ್ನಬಹುದು.