ಬಂಟ್ವಾಳ, ಫೆ 25 (DaijiworldNews/MS): ರಾಜ್ಯ ಸರಕಾರಿ ನೌಕರರ ಮುಷ್ಕರ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಕಾಲ ನಡೆಯಲಿದ್ದು, ಬಂಟ್ವಾಳದಲ್ಲೂ ಎಲ್ಲ ಸರ್ಕಾರಿ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂದು ಶುಕ್ರವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸರಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದಾರೆ.
ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಇನ್ನೂ ಸರಕಾರ ಜಾರಿಗೊಳಿಸಿಲ್ಲ. ಕೇವಲ ಭರವಸೆಯನ್ನು ನೀಡುತ್ತಿದೆಯೇ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಬಜೆಟ್ ನಲ್ಲೂ ಯಾವುದೇ ಪ್ರಸ್ತಾಪ ಮಾಡದೇ ಇರುವುದು ನೌಕರರಲ್ಲಿ ನಿರಾಶೆ ಮೂಡಿದೆ, ಹೀಗಾಗಿ ಮುಷ್ಕರ ಅನಿವಾರ್ಯವಾಗಿದೆ ಎಂದರು.
ಕಾರ್ಯದರ್ಶಿ ಸಂತೋಷ್ ಕೋಟ್ಯಾನ್, ಖಜಾಂಚಿ ಬಸಯ್ಯ ಆಲಿಮಟ್ಟಿ, ರಾಜ್ಯ ಪರಿಷತ್ ಸದಸ್ಯ ಜೆ.ಜನಾರ್ದನ, ಪ್ರಾ.ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಮುಖರಾದ ಜೋಯೆಲ್ ಲೋಬೊ, ಯತೀಶ್ ಬಿ., ರತ್ನಾವತಿ, ಇಂದುಶೇಖರ, ಪುಟ್ಟರಂಗನಾಥ, ಬಸವರಾಜ, ಮುಸ್ತಫಾ, ಜನಾರ್ದನ ಮತ್ತಿತರರು ಉಪಸ್ಥಿತರಿದ್ದರು.