ಮಂಗಳೂರು,ಮಾ.17(AZM):ನಗರದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ನಗರದ ಬಂದರು ಬದ್ರಿಯಾ ಹೊಟೇಲ್ನ ನಾರಾಯಣ ಹೊಟೇಲ್ ಬಳಿ ಭಾನುವಾರ ಬೆಳಿಗ್ಗೆ ಮೃತದೇಹವನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಪಾಂಡೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಿದ್ದಾರೆ.
ಮೃತ ವ್ಯಕ್ತಿ ತಮಿಳುನಾಡಿನ ಮೂಲದವನಾಗಿರಬೇಕೆಂದು ಶಂಕೆ ವ್ಯಕ್ತಪಡಿಸಲಾಗಿದ್ದು, 35ರ ಹರೆಯದ ಆಸುಪಾಸಿನ ಈ ವ್ಯಕ್ತಿ ಕೂಲಿಕಾರ್ಮಿಕನಾಗಿದ್ದು, ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಕುಡಿತದ ಅಮಲಿನಲ್ಲಿ ಪರಿಚಿತರೇ ಕೊಲೆಗೈದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ತೀವ್ರಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.