ಮಂಗಳೂರು, ಮಾ 01 (DaijiworldNews/SM): ಬಾವಿ ಕುಡಿಯುವ ನೀರಿಗೆ ಡ್ರೈನೇಜ್ ನೀರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೇಯರ್ ಜಯಾನಂದ್ ಅಂಚನ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್ತಿಯ ಯೆಯ್ಯಾಡಿ 22ನೇ ವಾರ್ಡ್ ನಲ್ಲಿ ಘಟನೆ ನಡೆದಿದ್ದು, ಈ ಭಾಗದಲ್ಲಿ ಡ್ರೈನೇಜ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಈ ವೇಳೆ ಡ್ರೈನೇಜ್ ನೀರು ಸೇರ್ಪಡೆ ಆಗಿದೆ ಎಂದು ಮಂಗಳೂರು ಮನಪಾ ಮೇಯರ್ ಜಯಾನಂದ್ ಅಂಚನ್ ಹೇಳಿದ್ದಾರೆ.
ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಸ್ಥಳೀಯರ ಮನವಿಯಂತೆ ವ್ಯವಸ್ಥೆ ಮಾಡಲಾಗಿದೆ. ಕೊಳಚೆ ನೀರು ಸೇರ್ಪಡೆಗೆ ಮುಂದಿನ ದಿನಗಳಲ್ಲಿ ಸೂಕ್ತ ಪರಿಹಾರ ಆಗಲಿದೆ. ಕಾಮಗಾರಿ ವೇಳೆ ಸಣ್ಣ ಪುಟ್ಟ ಅಡಚಣೆಗಳಿಂದ ಈ ರೀತಿಯ ಘಟನೆ ನಡೆಯುತ್ತಿದೆ. ಜನ್ರಿಗಾದ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲಾಗುತ್ತದೆ ಎಂದು ಮೇಯರ್ ಜಯಾನಂದ್ ಆಂಚನ್ ತಿಳಿಸಿದ್ದಾರೆ.
ಈಗಾಗಲೇ ಈ ಭಾಗಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಆ ಭಾಗದಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಶಾಸಕ ಮೂಲಕ ಒದಗಿಸಲಾಗಿದೆ. ನಾಲ್ಕು ಐದು ದಿನದಲ್ಲಿ ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲಾಗುತ್ತದೆ ಎಂದರು.